HomeKarnatakaಶುಭ ಸುದ್ದಿ: ಎಲಿವೇಟೆಡ್ ಕರ್ನಾಟಕ ಯೋಜನೆಯಡಿ ಸ್ಟಾರ್ಟ್ ಅಪ್ ಗಳಿಗೆ ಧನಸಹಾಯ ಅವಧಿ ಜ. 1ರವರೆಗೆ...

ಶುಭ ಸುದ್ದಿ: ಎಲಿವೇಟೆಡ್ ಕರ್ನಾಟಕ ಯೋಜನೆಯಡಿ ಸ್ಟಾರ್ಟ್ ಅಪ್ ಗಳಿಗೆ ಧನಸಹಾಯ ಅವಧಿ ಜ. 1ರವರೆಗೆ ವಿಸ್ತರಣೆ

ಬೆಂಗಳೂರು: ಎಲಿವೇಟೆಡ್ ಕರ್ನಾಟಕ ಯೋಜನೆಯಡಿ ಸ್ಟಾರ್ಟ್ ಆಫ್ ಗಳಿಗೆ ದನ ಸಹಾಯ ನೀಡುವ ಅವಧಿಯನ್ನು ಜನವರಿ 1ರವರೆಗೆ ವಿಸ್ತರಿಸಲಾಗಿದೆ.

ಯೋಜನೆಗೆ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 23ರ ವರೆಗೆ ಇದ್ದ ಅರ್ಜಿ ಸಲ್ಲಿಕೆ ಕಾಲಾವಕಾಶವನ್ನು ಜನವರಿ 1ರವರೆಗೆ ವಿಸ್ತರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ಹೊಸ ಸ್ಟಾರ್ಟ್ ಅಪ್ ಗಳಿಂದ ವಿನೂತನ ಚಿಂತನೆ ಹೊರತಂದು ಅದನ್ನು ಪೋಷಿಸುವ ಜೊತೆಗೆ ವಿವಿಧ ಹಂತದ ಹಣಕಾಸು ನೆರವು ನೀಡುವ ಉದ್ದೇಶದಿಂದ ಎಲಿವೇಟೆಡ್ ಕರ್ನಾಟಕ ಯೋಜನೆ ರೂಪಿಸಲಾಗಿದೆ. 50 ಲಕ್ಷ ರೂ. ವರೆಗೆ ಅನುದಾನ ನೀಡಲಾಗುವುದು ಯೋಜನೆಯ ಉದ್ದೇಶವಾಗಿದೆ. ಹೆಚ್ಚಿನ ವಿವರ ಅರ್ಜಿ ಸಲ್ಲಿಕೆಗೆ ಸ್ಟಾರ್ಟ್ ಆಫ್ ಕರ್ನಾಟಕ missionstartupKarnataka.org ವೆಬ್ಸೈಟ್ ಗಮನಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular