HomeKarnatakaರಾಜ್ಯದ ಹಿರಿಯ KAS ಅಧಿಕಾರಿಗಳ ವರ್ಗಾವಣೆ: ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ಹಿರಿಯ KAS ಅಧಿಕಾರಿಗಳ ವರ್ಗಾವಣೆ: ಸರ್ಕಾರದಿಂದ ಮಹತ್ವದ ಆದೇಶ

ಆಡಳಿತಾತ್ಮಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಹಿರಿಯ ಶ್ರೇಣಿಯ ಕೆಎಎಸ್ (ಕರ್ನಾಟಕ ಆಡಳಿತ ಸೇವೆ) ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವಪ್ರಸಾದ್ ಕೆ.ಹೆಚ್. ಅವರು ರಾಜ್ಯಪಾಲರ ಆದೇಶದಂತೆ ಅಧಿಸೂಚನೆ ಪ್ರಕಟಿಸಿದ್ದಾರೆ.ಸ್ಥಳ ನಿಯೋಜನೆಗೊಳ್ಳದ ಅಧಿಕಾರಿಗಳು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ (ಸಿಆಸುಇ) ವರದಿ ಮಾಡಿಕೊಳ್ಳುವಂತೆ ನಿರ್ದೇಶಿಸಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳ ವಿವರ

ಸೌಮ್ಯ ಎನ್. ಗೌಡ:

ಹಿಂದಿನ ಹುದ್ದೆ: ವಿಶೇಷ ಭೂಸ್ವಾಧೀನಾಧಿಕಾರಿ, ಬೆಂಗಳೂರು ನಗರ ಜಿಲ್ಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ಹುದ್ದೆ: ಉಪ ಕಾರ್ಯದರ್ಶಿ (ಭೂಸ್ವಾಧೀನ, ಪುನರ್ ವಸತಿ ಮತ್ತು ಪುನರ್ ನಿರ್ಮಾಣ), ಕಂದಾಯ ಇಲಾಖೆ, ಬೆಂಗಳೂರು

ತಬಸ್ಸುಮ್ ಜಹೇರಾ:

ಹಿಂದಿನ ಹುದ್ದೆ: ಸಾರ್ವಜನಿಕ ಸಂಪರ್ಕಾಧಿಕಾರಿ, ತುಮಕೂರು ಮಹಾನಗರ ಪಾಲಿಕೆ

ಹೊಸ ಹುದ್ದೆ: ವಿಶೇಷ ಭೂಸ್ವಾಧೀನಾಧಿಕಾರಿ, ಕೆ.ಐ.ಎ.ಡಿ.ಬಿ, ತುಮಕೂರು (ಸೋಮಪ್ಪ ಕಡಕೋಳ ಅವರ ಜಾಗಕ್ಕೆ)

ಸೋಮಪ್ಪ ಕಡಕೋಳ:

ಹಿಂದಿನ ಹುದ್ದೆ: ವಿಶೇಷ ಭೂಸ್ವಾಧೀನಾಧಿಕಾರಿ, ಕೆ.ಐ.ಎ.ಡಿ.ಬಿ, ತುಮಕೂರು

ಹೊಸ ಹುದ್ದೆ: ಸಾರ್ವಜನಿಕ ಸಂಪರ್ಕಾಧಿಕಾರಿ, ತುಮಕೂರು ಮಹಾನಗರ ಪಾಲಿಕೆ (ತಬಸ್ಸುಮ್ ಜಹೇರಾ ಅವರ ಜಾಗಕ್ಕೆ)

ಡಾ. ವಿಜಯ್ ಕುಮಾರ್ ಬಿ. ಅಜೂರ್:

ಹಿಂದಿನ ಹುದ್ದೆ: ಉಪ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ

ಹೊಸ ಹುದ್ದೆ: ಕುಲಸಚಿವರು (ಆಡಳಿತ), ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ (ಶಂಕರಗೌಡ ಎಸ್. ಸೋಮನಾಳ್ ಅವರಿಗೆ ಯಾವುದೇ ಹುದ್ದೆ ತೋರಿಸಲಾಗಿಲ್ಲ)

ಕೆಪಿಎಸ್‌ಸಿಗೆ ಐಎಎಸ್ ಅಧಿಕಾರಿಗಳ ನೇಮಕ

ಇತ್ತೀಚೆಗೆ ಪರೀಕ್ಷಾ ಅಕ್ರಮ ಆರೋಪಗಳು ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿದ್ದ ದಿಗ್ವಿಜಯ್ ಬೋಡ್ಕೆ ಅವರನ್ನು ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಅವರ ಜಾಗಕ್ಕೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದ್ದು, ಜಂಟಿ ಪರೀಕ್ಷಾ ನಿಯಂತ್ರಕರಾಗಿ ಐಎಎಸ್ ಅಧಿಕಾರಿ ಲವೀಶ್ ಓರ್ಡಿಯಾ ಅವರನ್ನು ಸರ್ಕಾರ ನೇಮಕ ಮಾಡಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular