ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಅ.01ರಂದು ರಾಜ್ಯಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.

ರಾಜ್ಯ ಮಟ್ಟದಲ್ಲಿ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿದಂತೆ ಒಟ್ಟು 07 ಪ್ರಶಸ್ತಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಅರ್ಹ ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಂ ದ ನಿಗದಿತ 1&2ರ ನಮೂನೆಯ ಅರ್ಜಿಯ ಎಲ್ಲಾ ಕಲಂಗಳನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 31 ರೊಳಗಾಗಿ ದ್ವಿಪ್ರತಿಯಲ್ಲಿ ಪ್ರಸ್ತಾವನೆಯನ್ನು ಕಚೇರಿಗೆ ಸಲ್ಲಿಸಬೇಕು.

ಅವಧಿ ಮೀರಿಬಂದ ಪ್ರಸ್ತಾವನೆಯನ್ನು ಪರಿಗಣಿಸಲಾಗುವುದಿಲ್ಲ ಅಥವಾ ರದ್ದು ಪಡಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್:www.dwdsc.karnataka.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದು ಹಾಗೂ ಕಚೇರಿಯ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read