BIG NEWS : ಜುಲೈ 3 ರಿಂದ ‘ರಾಜ್ಯ ಬಜೆಟ್ ಅಧಿವೇಶನ’ : ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ  ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ವಿಧಾನಸೌಧದಲ್ಲಿ ಜುಲೈ 3 ರಿಂದ ಜುಲೈ 14 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ವಿಧಾನಸೌಧದ ಸುತ್ತಾಮುತ್ತಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಈ ವೇಳೆ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಮೆರವಣಿಗೆ ಹಾಗೂ ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ಶಸ್ತ್ರಾಸ್ತ್ರ ಹಾಗೂ ಸ್ಪೋಟಕ ವಸ್ತುಗಳ ಸಾಗಾಟ , ಶೇಖರಣೆ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಮೀರಿ ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3ರಿಂದ ಆರಂಭವಾಗಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಡಲಿದ್ದಾರೆ. ಜುಲೈ 7ರಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.ಜುಲೈ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read