HomeKarnatakaBIG NEWS: ಮೇನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಚಿವ ಸ್ಥಾನ ಸಿಗುವ ವಿಶ್ವಾಸದಲ್ಲಿ ಸಲೀಂ...

BIG NEWS: ಮೇನಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಚಿವ ಸ್ಥಾನ ಸಿಗುವ ವಿಶ್ವಾಸದಲ್ಲಿ ಸಲೀಂ ಅಹಮದ್

ಹುಬ್ಬಳ್ಳಿ: ಮೇ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಹೇಳಿದ್ದಾರೆ.

ಈ ಹಿಂದೆ ಸಚಿವ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಸಿಗಬೇಕಿತ್ತು. ಈ ಬಾರಿ ಮೇ ತಿಂಗಳಲ್ಲಿ ನಡೆಯುವ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ ಅಹಮದ್ ಅವರು, ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಅವರನ್ನು ಶೀಘ್ರವೇ ಉಚ್ಚಾಟಿಸುವ ಮಾಹಿತಿ ಇದೆ. ಇಬ್ಬರು ನಮ್ಮ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರು ಯಾವಾಗ ಅಧಿಕೃತವಾಗಿ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬುದನ್ನು ನೋಡಬೇಕಿದೆ. ಇನ್ನು ಕೆಲವು ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದು, ನಮ್ಮ ಪಕ್ಷದ ವರಿಷ್ಠರು ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular