HomeKarnatakaBIG NEWS : ರಾಜ್ಯದ ಪದವಿ, PhD ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ...

BIG NEWS : ರಾಜ್ಯದ ಪದವಿ, PhD ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ, 15 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://bcwd.karnataka.gov.in/ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪ್ರವರ್ಗ-2ಎ, 3ಎ,3ಬಿ ರೂ.8 ಲಕ್ಷ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗಾಗಿ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular