HomeKarnatakaರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಗುಡ್ ನ್ಯೂಸ್ : ಜನವರಿಯಲ್ಲಿ ‘ಯುವನಿಧಿ’ ಜಾರಿ

ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಗುಡ್ ನ್ಯೂಸ್ : ಜನವರಿಯಲ್ಲಿ ‘ಯುವನಿಧಿ’ ಜಾರಿ

ಬೆಂಗಳೂರು : ರಾಜ್ಯದ ಡಿಪ್ಲೋಮಾ, ಪದವೀಧರರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನ ಜನವರಿಯಲ್ಲಿ ‘ಯುವನಿಧಿ’ ಜಾರಿಗೊಳಿಸುವುದಾಗಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ನಮ್ಮ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ, ಜಾರಿಗೊಳಿಸಲಾಗುತ್ತಿದೆ. 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಆಡಳಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸೀಮಿತವಾಗದೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ಕೊಟ್ಟು ಕರ್ನಾಟಕ ಅಭಿವೃದ್ಧಿ ಮಾದರಿ ಆಡಳಿತವೆಂಬ ನವ ಕಲ್ಪನೆಗೆ ನಾಂದಿಯಾಗಿದ್ದೇವೆ. ನಮ್ಮ ಸಾಧನೆಗಳು ಸದನದ ಒಳಗೆ ಮತ್ತು ಹೊರಗೆ ಹಾಳೆಗಳಿಗೆ ಸೀಮಿತವಾಗಿರದೆ ಜನರ ಬದುಕಲ್ಲಿ ಪ್ರತಿಫಲಿಸುತ್ತಿವೆ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular