ಬೆಂಗಳೂರು: ರಾಜ್ಯ ಶಿಕ್ಷಣ ನೀತಿ(SEP) ವರದಿ ಸಿದ್ದವಾಗಿದ್ದು, 2025- 26 ನೇ ಸಾಲಿನಿಂದಲೇ ಜಾರಿಗೊಳಿಸಲು ಚರ್ಚೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ರಾಜ್ಯ ಶಿಕ್ಷಣ ನೀತಿ ಆಯೋಗ ಮೇ ಕೊನೆಯ ವಾರ ಸಭೆ ನಡೆಸಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆ ಇದೆ. ಎಸ್ಇಪಿ ವರದಿ ಈ ಶೈಕ್ಷಣಿಕ ವರ್ಷದಿಂದ ಜಾರಿಗೆ ಕ್ರಮ ಕೈಗೊಳ್ಳಲಾಗುವುದು. ಮಧ್ಯಂತರ ವರದಿಯ ಶಿಫಾರಸ್ಸಿನ ಮೂಲಕ 4 ವರ್ಷದ ಪದವಿಯನ್ನು ಮೂರು ವರ್ಷಕ್ಕೆ ಕಡಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಆಂಗ್ಲ ಭಾಷೆಯಲ್ಲಿ ಎಸ್ಇಪಿ ವರದಿ ತಯಾರಿಸಿದ್ದು, ಅನುವಾದ ಕಾರ್ಯ ನಡೆಯುತ್ತಿದೆ. ಬಹಳ ಎಚ್ಚರದಿಂದ ಅನುವಾದ ಮಾಡಬೇಕಿರುವುದರಿಂದ ಆಯೋಗ ಸಮಯ ಕೇಳಿದೆ. ಕೊನೆಯ ವಾರ ವರದಿ ಸಲ್ಲಿಸಲು ಆಯೋಗ ನಿರ್ಧರಿಸಿದೆ. ಮೇ 25 ರಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.