BREAKING : ಬೇಲೂರಿನಲ್ಲಿ ‘ಸಾಲು ಮರದ ತಿಮ್ಮಕ್ಕ ವಸ್ತು ಸಂಗ್ರಹಾಲಯ’ ತೆರೆಯಲು ರಾಜ್ಯ ಸರ್ಕಾರ ಚಿಂತನೆ : CM ಸಿದ್ದರಾಮಯ್ಯ

ಬೆಳಗಾವಿ : ಬೇಲೂರಿನಲ್ಲಿ ‘ಸಾಲು ಮರದ ತಿಮ್ಮಕ್ಕ ವಸ್ತು ಸಂಗ್ರಹಾಲಯ’ ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅವರು ಮಾತನಾಡಿದರು. ಬೇಲೂರಿನಲ್ಲಿ ‘ಸಾಲು ಮರದ ತಿಮ್ಮಕ್ಕ ವಸ್ತು ಸಂಗ್ರಹಾಲಯ’ ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಹಾಗೂ ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹಲವು ಪ್ರಶಸ್ತಿಗಳನ್ನ ಕೂಡ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ  ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ಇತ್ತೀಚೆಗಷ್ಟೇ ನಿಧನರಾಗಿದ್ದರು.

ಸಾಲುಮರದ ತಿಮ್ಮಕ್ಕ (ಜನನ 30 ಜೂನ್ 1911), ಆಲ ಮರದ ತಿಮ್ಮಕ್ಕ ಎಂದೂ ಕರೆಯಲ್ಪಡುವ ಇವರು ಕರ್ನಾಟಕ ರಾಜ್ಯದ ಒಬ್ಬ ಭಾರತೀಯ ಪರಿಸರವಾದಿ , ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವಿನ 4.5 – ಕಿಲೋಮೀಟರ್ ( 2.8 ಮೈಲಿ ) ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಡುವ ಮತ್ತು ಅವುಗಳನ್ನು ಪೋಷಿಸುವ ಕಾರ್ಯಕ್ಕೆ ಹೆಸರುವಾಸಿಯಾಗಿದ್ದಾರೆ . ಅವರ ಕೆಲಸವನ್ನು ಭಾರತ ಸರ್ಕಾರ ಗುರುತಿಸಿತು ಮತ್ತು ಅವರಿಗೆ 2019 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಯಿತು.

ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read