HomeKarnatakaಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫೆ. 27ರ ಸಮ್ಮೇಳನದಲ್ಲಿ 7ನೇ ವೇತನ ಆಯೋಗ, ಉಚಿತ ಆರೋಗ್ಯ...

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಫೆ. 27ರ ಸಮ್ಮೇಳನದಲ್ಲಿ 7ನೇ ವೇತನ ಆಯೋಗ, ಉಚಿತ ಆರೋಗ್ಯ ಯೋಜನೆ ಜಾರಿ ಘೋಷಣೆ ಸಾಧ್ಯತೆ

ದಾವಣಗೆರೆ: ಫೆಬ್ರವರಿ 27ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ 7ನೇ ವೇತನ ಆಯೋಗದ ವರದಿ ಜಾರಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಹಾಸಮ್ಮೇಳನದಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿಗಳು 7ನೇ ವೇತನ ಆಯೋಗ ವರದಿ ಅನುಷ್ಟಾನ, ಉಚಿತ ಆರೋಗ್ಯ ಯೋಜನೆ ಸೇರಿ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಮಹಾ ಸಮ್ಮೇಳನದಲ್ಲಿ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular