BIG NEWS : ‘ರಾಜ್ಯ ಸರ್ಕಾರಿ’ ನೌಕರರು ಕರ್ತವ್ಯದ ವೇಳೆ ‘ID ಕಾರ್ಡ್’ ಧರಿಸುವುದು ಕಡ್ಡಾಯ : ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಛೇರಿಗಳಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಗಳನ್ನು ಧರಿಸುವಂತೆ ಸೂಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವನ್ನ ಸರ್ಕಾರ 15 : 07 : 2019 ರಂದು ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಸರ್ಕಾರದ ಅಧಿಕಾರಿಗಳು ಮತ್ತು ನೌಕರರು ಕಛೇರಿ ಅವಧಿಯಲ್ಲಿ ಸಂಬಂಧಪಟ್ಟ ಇಲಾಖೆಯು ನೀಡಲಾಗಿರುವ ಹೆಸರು, ಪದನಾಮ ಮತ್ತು ಇಲಾಖೆಯ ವಿವರಗಳುಳ್ಳ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿಕೊಳ್ಳತಕ್ಕದ್ದೆಂದು ತಿಳಿಸಲಾಗಿದೆ. ಕಲಸ-ಕಾರ್ಯಗಳ ನಿಮಿತ್ತ ಕಛೇರಿಗಳಿಗೆ ಭೇಟಿ ನೀಡುವ ಸಾರ್ವಜನಿಕರು ಅಧಿಕಾರಿಗಳನ್ನು ಮತ್ತು ನೌಕರರನ್ನು ಗುರುತಿಸಲು ಅನುಕೂಲವಾಗುವಂತೆ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸತಕ್ಕದ್ದು ಈ ಬಗ್ಗೆ ಸಾರ್ವಜನಿಕರು ಹಾಗೂ ಇತರ ಕಡೆಯಿಂದ ದೂರುಗಳು ಬಂದಲ್ಲಿ ಸಂಬಂಧಿಸಿದ ಕಛೇರಿ ಮೇಲಾಧಿಕಾರಿಗಳು ಶಿಸ್ತಿನ ಕ್ರಮವನ್ನು ಕೈಗೊಳ್ಳತಕ್ಕದ್ದು ಎಂದು ಸೂಚಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read