ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ನ.1 ರೊಳಗೆ ಈ ಕೆಲಸ ಮಾಡುವುದು ಕಡ್ಡಾಯ |Govt Employee

ಬೆಂಗಳೂರು : “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದರ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿತ್ತು.

ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ನವೆಂಬರ್ 1ರೊಳಗೆ ಕೆಂಪು -ಹಳದಿ ಟ್ಯಾಗ್(ಕೊರಳು ದಾರ) ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಕೆಂಪು ಹಳದಿ ಕೊರಳುದಾರ ಲಭ್ಯವಿಲ್ಲದಿದ್ದಲ್ಲಿ ಇಲಾಖೆಯ ಮುಖ್ಯಸ್ಥರು ಅಥವಾ ಸಕ್ಷಮ ಪ್ರಾಧಿಕಾರಗಳ ಗಮನಕ್ಕೆ ತರಬೇಕು. ನವೆಂಬರ್ 1ರೊಳಗೆ ಎಲ್ಲಾ ನೌಕರರ ಬಳಿ ಕೆಂಪು ಹಳದಿ ಬಣ್ಣದ ಕೊರಳು ದಾರ ಇರಬೇಕೆಂದು ಸೂಚನೆ ನೀಡಲಾಗಿದೆ.

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿತ್ತು.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ತಿಳಿಸಿತ್ತು..

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read