HomeKarnatakaBIG NEWS : 'ರಾಜ್ಯ ಸರ್ಕಾರಿ ನೌಕರ'ರೇ ಗಮನಿಸಿ : 2025 ನೇ ಸಾಲಿನ ಪರಿಮಿತ...

BIG NEWS : ‘ರಾಜ್ಯ ಸರ್ಕಾರಿ ನೌಕರ’ರೇ ಗಮನಿಸಿ : 2025 ನೇ ಸಾಲಿನ ಪರಿಮಿತ ರಜಾ ದಿನಗಳ ಪಟ್ಟಿ ಹೀಗಿದೆ.!

ಬೆಂಗಳೂರು : ರಾಜ್ಯ ಸರ್ಕಾರ 2025 ನೇ ಸಾಲಿನ ‘ಪರಿಮಿತ ರಜಾ ದಿನಗಳ ಪಟ್ಟಿ’ ಬಿಡುಗಡೆ ಮಾಡಿದೆ.
ಸರ್ಕಾರವು 2025ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ.

ಸೂಚನೆ:
1. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಗಣರಾಜ್ಯೋತ್ಸವ (26.01.2025), ಯುಗಾದಿ ಹಬ್ಬ (30.03.2025), ಮೊಹರಂ ಕಡೆ ದಿನ (06.07.2025) ಮತ್ತು ಮಹಾಲಯ ಅಮವಾಸ್ಯೆ (21.09.2025) ಹಾಗೂ ಎರಡನೇ ಶನಿವಾರದಂದು ಬರುವ ಕನಕದಾಸ ಜಯಂತಿ (08.11.2025) ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ.

2. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದು.

4. ದಿನಾಂಕ:03.09.2025 (ಬುಧವಾರ) ಕ್ಕೆಲ್ ಮೂಹೂರ್ತ, ದಿನಾಂಕ:18.10.2025 (ಶನಿವಾರ) ತುಲಾ ಸಂಕ್ರಮಣ ಹಾಗೂ ದಿನಾಂಕ:05.12.2025 (ಶುಕ್ರವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular