HomeLatest NewsBIG NEWS : 'ರಾಜ್ಯ ಸರ್ಕಾರಿ' ನೌಕರರೇ ಗಮನಿಸಿ : 'ಸಂಬಳ ಪ್ಯಾಕೇಜ್' ನಲ್ಲಿ ನೋಂದಾಯಿಸಲು...

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಸಂಬಳ ಪ್ಯಾಕೇಜ್’ ನಲ್ಲಿ ನೋಂದಾಯಿಸಲು ಜ. 16 ಕೊನೆಯ ದಿನ.!

ಬೆಂಗಳೂರು :     ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ఎలా ‘ఎ’ ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಕಾಲಾವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.

ಆದರೆ, ಹಲವು ಅಧಿಕಾರಿಗಳು/ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಮತ್ತು “ಬಿ” ಗುಂಪಿನ ಅಧಿಕಾರಿಗಳಿಗೆ ಹಾಗೂ ‘ಸಿ’ ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular