ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ 2024-25ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದಿನಾಂಕ: 18-05-2025 ರಿಂದ 20-05-2025ರವರೆಗೆ ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ದಿನಾಂಕ: 18-05-2025 ರಂದು ಸಂಜೆ 5-00 ಗಂಟೆಗೆ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸೂಚಿಸಿದೆ.
ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ಮಾತ್ರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಆದೇಶ ಸಂಖ್ಯೆ: ಎಫ್ಡಿ 2 ಎಸ್ಆರ್ಎಸ್ 2002, ದಿನಾಂಕ: 27-11-2002 ಹಾಗೂ ಕೆ.ಸಿ.ಎಸ್.ಆರ್. ನಿಯಮದನ್ವಯ ದಿನಾಂಕ: 18,19 ಮತ್ತು 20ನೇ ಮೇ 2025 ರಂದು ‘ವಿಶೇಷ ಸಾಂದರ್ಭಿಕ ರಜೆ’ ಪಡೆಯಲು ಅರ್ಹರಿರುತ್ತಾರೆ.
ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ನೌಕರರನ್ನು ಸಂಬಂಧಿಸಿದ ಕಛೇರಿ ಮುಖ್ಯಸ್ಥರು ಕ್ರೀಡಾಕೂಟದಲ್ಲಿ ಭಾಗವಹಿಸಲು ಕರ್ತವ್ಯದಿಂದ ಬಿಡುಗಡೆ ಮಾಡುವುದು.
ನಿಗದಿತ ದಿನಾಂಕದೊಳಗೆ Online ನಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅರ್ಹರಿರುತ್ತಾರೆ. ಕ್ರೀಡಾಕೂಟ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ.
ಕ್ರೀಡಾಕೂಟಗಳ ಉದ್ಘಾಟನೆ ಸಮಾರಂಭದಲ್ಲಿ ಎಲ್ಲಾ ಕ್ರೀಡಾಪಟುಗಳು ಕಡ್ಡಾಯವಾಗಿ ಟ್ರಾಕ್ಸ್ ಸೂಟ್ ಧರಿಸಿ ಭಾಗವಹಿಸುವುದು. ಈ ಸಮಾರಂಭದಲ್ಲಿ ಭಾಗವಹಿಸಿದ ನಂತರ ಕ್ರೀಡಾಪಟುಗಳು ತಮ್ಮ ಮೊಬೈಲ್ನಲ್ಲಿ ತೆಗೆದ ಶೆಲ್ಪಿ ಫೋಟೋವನ್ನು ಸಂಬಂಧಿಸಿದ ರಜಾ ಮಂಜೂರಾತಿ ಅಧಿಕಾರಿಗಳಿಗೆ ಸಲ್ಲಿಸಿ, ರಜಾ ಅನುಮೋದನೆ ಪಡೆಯುವುದು.

