HomeLatest NewsBIG NEWS : 'ರಾಜ್ಯ ಸರ್ಕಾರಿ' ನೌಕರರು ಇನ್ಮುಂದೆ 'ಖಾದಿ ಉಡುಪು' ಧರಿಸುವುದು ಕಡ್ಡಾಯ :...

BIG NEWS : ‘ರಾಜ್ಯ ಸರ್ಕಾರಿ’ ನೌಕರರು ಇನ್ಮುಂದೆ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ : ಸರ್ಕಾರ ಆದೇಶ

ಬೆಂಗಳೂರು :  ಇನ್ಮುಂದೆ ರಾಜ್ಯ ಸರ್ಕಾರಿ ನೌಕರರು ಖಾದಿ ಉಡುಪು ಧರಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.  ಜನವರಿ 29, 2026 ರಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಏನಿದೆ ಆದೇಶದಲ್ಲಿ..?

ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ನಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ ನೌಕರರುಗಳು ‘ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ತಮ್ಮ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲು ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಖಾದಿ” ಕೇವಲ ಒಂದು ಉಡುವು ಮಾತ್ರವಲ್ಲ ಅದು ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಪ್ರಸ್ತುತ ಖಾದಿ ನೇಕಾರರು ನೂತನ ಶೈಲಿಯ ವಿನ್ಯಾಸದಲ್ಲಿ ಉಡುಪುಗಳನ್ನು ತಯಾರಿಸಲು ಮುಂದಾಗಿದ್ದಾರೆ. ಅಲ್ಲದೇ, ಖಾದಿ ಉತ್ಪಾದನೆಯು ಗ್ರಾಮೀಣ ಆರ್ಥಿಕತೆಯ ಮೂಲ ಆಧಾರವಾಗಿದ್ದು, ರಾಜ್ಯದ ಸಾವಿರಾರು ಗ್ರಾಮೀಣ ನೂಲುಗಾರರು ಮತ್ತು ನೇಕಾರರಿಗೆ ನೇರ ಹಾಗೂ ಪರೋಕ್ಷವಾಗಿ ಜೀವನೋಪಾಯವನ್ನು ಒದಗಿಸುತ್ತಿದೆ.

ಆದುದರಿಂದ, 77ನೇ ಗಣರಾಜ್ಯೋತ್ಸವದ ಶುಭಸಂದರ್ಭದಲ್ಲಿ ಸಾರ್ವಜನಿಕ ಸೇವೆಯನ್ನು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ಮರುಸಂಪರ್ಕಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅದರಂತೆ, ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ನಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ ನೌಕರರುಗಳು ‘ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ತಮ್ಮ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲು ಕೋರಿದೆ.

ಈ ಕ್ರಮವು ಸರ್ಕಾರಿ ಅಧಿಕಾರಿ/ ನೌಕರರುಗಳಲ್ಲಿ ಸ್ವದೇಶಿ ಉತ್ಪನ್ನಗಳ ಬಗ್ಗೆ, ಗೌರವ, ಐಕ್ಯತೆ, ರಾಷ್ಟ್ರೀಯ ಭಾವನೆ, ಭಾರತೀಯತ ಸ್ವಾಭಿಮಾನ ಮತ್ತು ಸಾಮಾಜಿಕ ಜವಾಬ್ದಾರಿಯ ಭಾವನೆಯನ್ನು ಬೆಳೆಸುವಲ್ಲಿ ಸಹಾಯಕವಾಗಲಿದೆ ಎಂದು ಭಾವಿಸಿದೆ.ಎಲ್ಲಾ ಜಿಲ್ಲೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 176 ಖಾದಿ ಸಂಘ-ಸಂಸ್ಥೆಗಳ ಹೆಸರು, ವಿಳಾಸ ಹಾಗೂ ಉತ್ಪನ್ನಗಳ ವಿವರಗಳನ್ನು https//khadi.karnataka.gov.in ದಲ್ಲಿ ಪಡೆಯಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular