JOB ALERT : ರಾಜ್ಯ ಸರ್ಕಾರದಿಂದ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ.!

ಬೆಂಗಳೂರು : ರಾಜ್ಯದ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗಳಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025-2026 ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡಿ/ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪುಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಮತ್ತು ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದು ಅವಶ್ಯಕವಿರುತ್ತದೆ.

ಸದರಿ ಅಂಶಗಳ ಹಿನ್ನೆಲೆಯಲ್ಲಿ ಖಾಲಿ ಇರುವ ಉಪನ್ಯಾಸಕರು/ಶಿಕ್ಷಕರನ್ನು ಹುದ್ದೆಗಳಿಗೆ ಎದುರಾಗಿ ಈ ಕೆಳಕಂಡ ಷರತ್ತು ಮತ್ತು ಮಾರ್ಗಸೂಚಿಗಳಂತೆ ಅತಿಥಿ ಶಿಕ್ಷಕರನ್ನು ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಹಂತದಲ್ಲಿ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅನುಮತಿ ನೀಡಿದೆ.

ಮಾರ್ಗಸೂಚಿಗಳು:-
1) ರಾಜ್ಯಾದ್ಯಂತ ಜಿಲ್ಲಾ ಹಂತದಲ್ಲಿ ಈ ಕೆಳಕಂಡ ವೇಳಾಪಟ್ಟಿಯಂತೆ ಅರ್ಜಿಗಳನ್ನು ಆಹ್ವಾನಿಸುವುದು.

ಸೂಚನೆ:-
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಛೇರಿ, ತಾಲ್ಲೂಕು ಕಛೇರಿ ಹಾಗೂ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read