HomeKarnatakaBIGG NEWS : ‘ಉತ್ತರ ಕರ್ನಾಟಕ’ದ ಅಭಿವೃದ್ದಿಗೆ ರಾಜ್ಯ ಸರ್ಕಾರ ಬದ್ದ, ಪ್ರತ್ಯೇಕ ರಾಜ್ಯದ ಬೇಡಿಕೆ...

BIGG NEWS : ‘ಉತ್ತರ ಕರ್ನಾಟಕ’ದ ಅಭಿವೃದ್ದಿಗೆ ರಾಜ್ಯ ಸರ್ಕಾರ ಬದ್ದ, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಉತ್ತರ ಕರ್ನಾಟಕ’ದ ಅಭಿವೃದ್ದಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಮಂಡಲದಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಸಂಬಂಧಿಸಿದಂತೆ ಸದನದಲ್ಲಿ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದರು.

ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ.ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಕೀಕರಣಕ್ಕಾಗಿ ಬಹಳ ಜನ ಗಣ್ಯರು ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲು ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ 371 ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದರು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 2014 ಮತ್ತು 2017 ರಲ್ಲಿ ಉತ್ತರ ಕರ್ನಾಟಕದದ ಬಗ್ಗೆ ಚರ್ಚೆಯಾಗಿತ್ತು. ಒಮ್ಮೆ ಈ ಬಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ ಎಂದರು.

ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಪೂರ್ತಿ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟಕದ 5 ತಾಲ್ಲೂಕುಗಳು ಸೇರಿದಂತೆ ಹಿಂದುಳಿದ, ಅತೀ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14,877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10,280 ಕೋಟಿ ರೂ. ಹಾಗೂ 8,330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು ಎಂದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular