BREAKING NEWS : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನ ನೇಮಿಸಿ ರಾಜ್ಯ ಸರ್ಕಾರ ( Karnataka Govt) ಆದೇಶ ಹೊರಡಿಸಿದೆ.

ಈ ಕುರಿತು  ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಕಲ್ಪನ ಆದೇಶ ಹೊರಡಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ದಿನಾಂಕ 11-04-2023ರಲ್ಲಿ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು ಎಂದಿದ್ದಾರೆ. ಜಿಲ್ಲಾವಾರು ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವೆರೆಗೆ ನೇಮಕ ಮಾಡಿ ಆದೇಶಿಸಿದ್ದಾರೆ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಈ ಕೆಳಕಂಡ ಪ್ರಮುಖ ಅಂಶಗಳನ್ನು ಪರಿಶೀಲಿಸಿ ವರದಿಯನ್ನು ಸಲ್ಲಿಸಲು ಸೂಚನೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸಿರುವ ಕುರಿತು.ಸರ್ಕಾರವು ನೂತನವಾಗಿ ಘೋಷಣೆ ಮಾಡುವ ಯೋಜನೆಗಳ ಅನುಷ್ಟಾನದ ಪರಿಶೀಲನೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಸುವ್ಯವಸ್ಥೆಗೊಳಿಸುವುದು ಹಾಗೂ ಬಾಡಿಗೆ ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯತೆಗನುಗುಣವಾಗಿ ನಿವೇಶನಗಳನ್ನು ಒದಗಿಸಲು ಕ್ರಮವಹಿಸುವುದು.

ಆರೋಗ್ಯ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಲು ಆಗಾಗ್ಗೆ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವುದು, ವೈದ್ಯರ ಅಥವಾ ಇತರೆ ನೌಕರರ ಕೊರತೆ ಇದ್ದಲ್ಲಿ ಅದನ್ನು ಸರಿಪಡಿಸುವ ಕುರಿತು ಕ್ರಮಕೈಗೊಳ್ಳುವುದು.ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಶಾಲೆ, ಕಾಲೇಜು ಹಾಗೂ ಐಟಿಐ ಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಅಧ್ಯಯಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವುದು.ಶಾಲಾ ಕಟ್ಟಡ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ಪರಿಶೀಲಿಸುವುದು.ಸ್ವಂತ ಕಟ್ಟಡ ಇಲ್ಲದಿರುವ ಅಂಗನವಾಡಿಗಳಿಗೆ ನಿವೇಶನವನ್ನು ಒದಗಿಸಲು ಹಾಗೂ ನಿರ್ಮಾಣ ಹಂತದಲ್ಲಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಪರಿಶೀಲಿಸುವುದು ಎಂದು ಸೂಚನೆ ನೀಡಿದ್ದಾರೆ.

ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಹಾಗೂ ಸಂಸತ್ ಸದಸ್ಯರ ಪ್ರದೇಶಾಭಿವೃದ್ಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕಡ್ಡಾಯವಾಗಿ ಪರಿಶೀಲನ ನಡೆಸುವುದು. ಆಯಾ ವರ್ಷದಲ್ಲಿ ಕನಿಷ್ಟ 2 ಗ್ರಾಮ ಸಭೆಗಳಲ್ಲಿ ಭಾಗವಹಿಸುವುದು.ಗ್ರಾಮೀಣಾಭಿವೃದ್ಧಿ, ನಾಗರಾಭಿವೃದ್ಧಿ, ಇಂಧನ, జల ಸಂಪನ್ಮೂಲ, ಲೋಕೋಪಯೋಗಿ, ಕೃಷಿ, ತೋಟಗಾರಿಕ ಇಲಾಖೆಗಳಲ್ಲಿನ ಪ್ರಮುಖ ಕಾರ್ಯಕ್ರಮಗಳಾದ ಕುಡಿಯುವ ನೀರು, ರಸ್ತೆಗಳು, ವಿದ್ಯುಚ್ಛಕ್ತಿ, ಮೇವು ಲಭ್ಯತೆ, ಬೀಜ ಮತ್ತು ರಸಗೊಬ್ಬರ, ಮಧ್ಯಾಹ್ನದ ಬಿಸಿಯೂಟ, ನರೇಗಾ, ಸಾಮಾಜಿಕ ಭದ್ರತೆಯಡಿ ನೀಡುತ್ತಿರುವ ಪಿಂಚಣಿ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸುವುದು ಎಂದು ಸೂಚನೆ ನೀಡಿದ್ದಾರೆ.

 

 

 

 

 

 

 

 

 

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read