HomeLatest NewsBIG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಿಸಿ ಆದೇಶ

BIG NEWS : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ 101 ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ವೈಜ್ಞಾನಿಕ ದತ್ತಾಂಶವನ್ನು (Emperical Data) ಸಂಗ್ರಹಿಸಲು, ದಿನಾಂಕ: 05-05-2025 ರಿಂದ ಮನೆ-ಮನೆ ಭೇಟಿ ಮೂಲಕ ರಾಜ್ಯಾದ್ಯಂತ ಸಮೀಕ್ಷೆಯನ್ನು ಪ್ರಾರಂಭಿಸಲಾಗಿರುತ್ತದೆ.

ಸಮೀಕ್ಷಾ ಕಾರ್ಯದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಲು ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ, ದಿನಾಂಕ: 09.06.2025 ರಿಂದ ದಿನಾಂಕ: 22.06.2025 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ/ವಿಧಾನದ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. ನಾಗರೀಕ ಸೇವಾ ಕೇಂದ್ರಗಳಾದ, ‘ಕರ್ನಾಟಕ ಒನ್” (Karnataka one) ” ” (Bengaluru one) ” ” (Grama one) ಬಾಪೂಜಿ ಸೇವಾ ಕೇಂದ್ರಗಳು.
  2. 2.2.2.4 198 2.2.0.4 ช่อง (BBMP ward offices) ಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳು.
  3. Online 2, https://schedulecastesurvey.karnataka.gov.in/selfd eclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವುದು.
    ಈವರೆಗೂ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 91.00 ರಷ್ಟು ಪ್ರಗತಿಯನ್ನು ಸಾಧಿಸಲಾಗಿದ್ದು ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಶೇ. 50.00 ರಷ್ಟು ಪ್ರಗತಿಯಾಗಿರುತ್ತದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಪರಿಶಿಷ್ಟ ಜಾತಿ ಕುಟುಂಬದವರಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸಮೀಕ್ಷಾ ದಿನಾಂಕವನ್ನು ದಿನಾಂಕ: 23.06.2025 ರಿಂದ ದಿನಾಂಕ: 30.06.2025 ರವರೆಗೆ ವಿಸ್ತರಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular