BREAKING : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಿಸಿ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಿಸಿ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸುವ ಕುರಿತು ದಿನಾಂಕ: 05-05-2025 ರಿಂದ ಸಮೀಕ್ಷಾ ಕಾರ್ಯವನ್ನು ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ಈ ಕೆಳಕಂಡಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

1) ಮನೆ-ಮನೆ ಭೇಟಿ ನೀಡಿ ಸಮೀಕ್ಷೆ- ದಿನಾಂಕ: 26-05-2025 ರಿಂದ 29-05-2025 ರವರೆಗೆ ವಿಸ್ತರಿಸಲಾಗಿದೆ.
2) ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) – ದಿನಾಂಕ: 30-05-2025 ರಿಂದ ದಿನಾಂಕ: 01-06-2025 ರವರೆಗೆ (03 ದಿನಗಳು) ಮರು ನಿಗದಿಪಡಿಸಲಾಗಿದೆ.
3) ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ದಿನಾಂಕ:01-06-2025 ರವರೆಗೆ ಮುಂದುವರೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read