HomeKarnatakaBIG NEWS : ಸರ್ಕಾರಿ ನೌಕರರ 'ವರ್ಗಾವಣಾ ಮಾರ್ಗಸೂಚಿ' ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ

BIG NEWS : ಸರ್ಕಾರಿ ನೌಕರರ ‘ವರ್ಗಾವಣಾ ಮಾರ್ಗಸೂಚಿ’ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ, ಮಾರ್ಗಸೂಚಿಗಳನ್ನು ನಿರ್ದಿಷ್ಟಡಿಸಲಾಗಿದೆ. ಸದರಿ ಆದೇಶದ ಕಂಡಿಕೆ 9(ಆ)ರಲ್ಲಿ ಈ ಕೆಳಗಿನಂತೆ ತಿಳಿಸಲಾಗಿರುತ್ತದೆ.

ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಮೇಲೆ ತಿಳಿಸಿರುವಂತೆ ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ತಪ್ಪದೇ ಪಡೆಯತಕ್ಕದ್ದು,ಸರ್ಕಾರದ ಪುಧಾನ ಕಾರ್ಯದರ್ಶಿ/ಕಾರ್ಯದರ್ಶಿಯವರು ಯಾವುದೇ ಪುಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಸಿರೀಕರಣ/ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನಾಂಕ:30.05.2023, 16.06.2023 ಮತ್ತು 30.06.2023ರ ಸರ್ಕಾರದ ಆದೇಶಗಳಲ್ಲಿ 2023-24ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರತ್ನನ್ನು ಮೀರದಂತೆ ದಿನಾಂಕ:01.06.2023 ರಿಂದ 03.07.2023 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ ಎಂದು ಸೂಚನೆ ನೀಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular