BREAKING: ಯಡಿಯೂರಪ್ಪ ವಿರುದ್ಧ ಮತ್ತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಅನುಮತಿ ಕೋರಿದೆ.

ಈ ಹಿಂದೆ ಪ್ರಾಸಿಕ್ಯೂಷನ್ ಅನುಮತಿಗೆ ರಾಜ್ಯಪಾಲರು ತಿರಸ್ಕರಿಸಿದ್ದರು. ಇದೀಗ ಮತ್ತೆ ಪುನರ್ ಪರಿಶೀಲನೆಗೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ. ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಗೆ ಮತ್ತೆ ರಾಜ್ಯಪಾಲರ ಅನುಮತಿ ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

2020 ರ ನವೆಂಬರ್ 19 ರಂದು ಯಡಿಯೂರಪ್ಪ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದೂರು ನೀಡಿದ್ದರು. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಸಿಬಿಗೆ ಅಬ್ರಹಾಂ ದೂರು ನೀಡಿದ್ದರು. ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಪಿಎಂಎಲ್ಎ ಕಾಯ್ದೆಯಡಿ ದೂರು ನೀಡಿದ್ದು, ಯಡಿಯೂರಪ್ಪ ಕುಟುಂಬದವರ ವಿರುದ್ಧ ಗಂಭೀರ ಆರೋಪ ಮಾಡಲಾಗಿತ್ತು ಇದೀಗ ಮತ್ತೆ ಪ್ರಾಸಿಕ್ಯೂಷನ್ ಗೆ ಅನುಮತಿ ಪುನರ್ ಪರಿಶೀಲನೆಗೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read