ಸರ್ಕಾರಿ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿ : ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2023-24ನೇ ಸಾಲಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿ ಕೈಗೊಳ್ಳಲು ಉಲ್ಲೇಖ(3) ಸರ್ಕಾರದ ಆದೇಶದಲ್ಲಿ ಒಟ್ಟು 1255 ಶಾಲೆಗಳ 4242 ಕೊಠಡಿಗಳ ದುರಸ್ಥಿ ಕಾಮಗಾರಿಗಳಿಗೆ ಕೆಳಕಂಡ ಲೆಕ್ಕ ಶೀರ್ಷಿಕೆಗಳ ಅಡಿಯಲ್ಲಿ ರೂ.2892.84 ಲಕ್ಷಗಳ ಅನುದಾನ ಮಂಜೂರಾಗಿದ್ದು, ಅದರನ್ವಯ ಪರಿಶೀಲಿಸಿ ಕೆಳಕಂಡಂತೆ ಆದೇಶಿಸಿದೆ.

2023-24ನೇ ಸಾಲಿಗೆ “ಮಹತ್ವಾಕಾಂಕ್ಷಿ ತಾಲ್ಲೂಕುಗಳಲ್ಲಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಮೂಲಭೂತ ” ಲೆಕ್ಕ ಶೀರ್ಷಿಕೆ : 4202-01-201-1-08-132/139/422/423 ರಡಿಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಕೊಠಡಿಗಳ ದುರಸ್ಥಿ ಕಾಮಗಾರಿಗೆ ರೂ.2892.84 ಲಕ್ಷಗಳ ಅನುದಾನವನ್ನು ಅನುಬಂಧ-1 ರಲ್ಲಿ ವಿವರಿಸಿರುವಂತೆ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಇವರ ಖಾತೆಗೆ “ಖಜಾನೆ -2” ತಂತ್ರಾಂಶದಲ್ಲಿ ‘ಯು’ ಮೋಡ್ ಮೂಲಕ ಅನುದಾನವನ್ನು ಕೆಳಕಂಡ ಷರತ್ತಿಗೊಳಪಟ್ಟು ಬಿಡುಗಡೆ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read