BIG NEWS : ರಾಜ್ಯ ಸರ್ಕಾರದಿಂದ ರೆಸಾರ್ಟ್, ಹೋಂಸ್ಟೇಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ, ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರ ರೆಸಾರ್ಟ್, ಹೋಂಸ್ಟೇಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗೂ ಈ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಸೂಚನೆ ನೀಡಿದೆ.

ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಪ್ರವಾಸಿಗರಿಗೆ ಭದ್ರತೆ ಮತ್ತು ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ವಿಶೇಷ ಆದ್ಯತೆ, ರೆಸಾರ್ಟ್, ಹೋಂ ಸ್ಟೇಗಳಿಗೆ ಮಾರ್ಗಸೂಚಿ ಬಿಡುಗಡೆ

• ವಿದೇಶಿಯರು ಒಳಗೊಂಡು ಎಲ್ಲ ಪ್ರವಾಸಿಗರ ಭದ್ರತೆ ಮತ್ತು ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಎಲ್ಲ ಹೋಂ ಸ್ಟೇಗಳು ಕಡ್ಡಾಯವಾಗಿ ತೆಗೆದುಕೊಳ್ಳಬೇಕು.

• ಹೊರವಲಯ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಸಂದರ್ಭದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಅನುಮತಿ ಪಡೆದುಕೊಳ್ಳಬೇಕು.

• ಪೂರ್ವಾನುಮತಿ ಪಡೆಯದೇ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಅಥವಾ ಕಾಡುಪ್ರಾಣಿಗಳಿಂದ ದುರ್ಘಟನೆಗಳು ಸಂಭವಿಸಿದರೆ ಆಯಾ ರೆಸಾರ್ಟ್, ಹೋಂ ಸ್ಟೇ ಮಾಲೀಕರೇ ಹೊಣೆಗಾರರು ಮತ್ತು ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ.

ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್ ಸ್ಟೇಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳತಕ್ಕದ್ದು.

b) ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಯಲ್ಲಿ ಮಾಹಿತಿಯನ್ನು ನೀಡಿ, ಅನುಮತಿ ಪಡೆಯತಕ್ಕದ್ದು.

c) ಪೊಲೀಸರಿಂದ/ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿಯನ್ನು ಪಡೆಯದೇ ನಿರ್ಜನ ಪ್ರದೇಶ/ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಆಯಾ ಹೋ‍ಮ್ ಸ್ಟೇ ಮಾಲೀಕರು ಜವಾಬ್ದಾರರಾಗುತ್ತಾರೆ ಹಾಗೂ ಕಾನೂನಿನ್ವಯ ಶಿಕ್ಷಾರ್ಹ ಒಳಪಡುತ್ತಾರೆ.

ಈ ಸಂಬಂಧ ಅಗತ್ಯ ಸೂಚನೆಗಳನ್ನು ನಿಮ್ಮ ಜಿಲ್ಲೆಯ ಪ್ರತಿ ರೆಸಾರ್ಟ್ ಹಾಗೂ ಹೋಮ್ ಸೈಗಳಿಗೆ ಖುದ್ದಾಗಿ ಜಾರಿಗೊಳಿಸಿ ಅವರಿಂದ ಸೂಕ್ತ ಮುಚ್ಚಳಿಕೆ ಪಡೆದುಕೊಳ್ಳುವುದು. ಪ್ರತಿ ರೆಸಾರ್ಟ್/ಹೋಮ್ ಸ್ಟೇಗಳಿಂದ ಅವರ ಸ್ಥಳ ವೀಕ್ಷಣಾ ಕಾರ್ಯಕ್ರಮಗಳ ಪಟ್ಟಿಯನ್ನು ಪಡೆದು ಆ ಕಾರ್ಯಕ್ರಮಗಳಲ್ಲಿ ಯಾವುದೇಅಪಾಯವಿಲ್ಲದಿರುವುದನ್ನು ಖಾತರಿಪಡಿಸಿಕೊಳ್ಳಲು ತಿಳಿಸಿದೆ.ಈ ಪ್ರಕ್ರಿಯೆಯನ್ನು ಒಂದು ವಾರದಲ್ಲಿ ಕೈಗೊಂಡು ದಿನಾಂಕ:18.03.2025 ರೊಳಗೆ ತಪ್ಪದೇ ವರದಿಯನ್ನು ಸಲ್ಲಿಸಲು ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read