HomeBusinessಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಅವಧಿ ವಿಸ್ತರಣೆಗೆ ರಾಜ್ಯದಿಂದ ಕೇಂದ್ರಕ್ಕೆ ಪತ್ರ

ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಅವಧಿ ವಿಸ್ತರಣೆಗೆ ರಾಜ್ಯದಿಂದ ಕೇಂದ್ರಕ್ಕೆ ಪತ್ರ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ.

ಮಾರ್ಚ್ 31ಕ್ಕೆ ಕೊಬ್ಬರಿ ಮಾರಾಟಕ್ಕೆ ನೋಂದಣಿ ಅವಧಿ ಮುಕ್ತಾಯವಾಗಿ ಕೊಬ್ಬರಿ ಖರೀದಿ ಆರಂಭವಾಗಿದ್ದು,  ನೋಂದಣಿ ಮಾಡಿಸಿದ ರೈತರು ಜೂನ್ 14ರೊಳಗೆ ಕೊಬ್ಬರಿ ಮಾರಾಟ ಮಾಡಬೇಕಿದೆ. ಆದರೆ, ಇನ್ನೂ ಸುಮಾರು 7 ಸಾವಿರ ರೈತರು ಕೊಬ್ಬರಿ ಮಾರಾಟ ಮಾಡಬೇಕಿರುವುದರಿಂದ ಅವಧಿ ವಿಸ್ತರಿಸಬೇಕೆಂದು ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ.

ಕೇಂದ್ರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನೂತನ ಸಹಕಾರ ಸಚಿವರು ಇದಕ್ಕೆ ಒಪ್ಪಿಗೆ ಸೂಚಿಸಬೇಕಿದೆ. ಒಪ್ಪಿಗೆ ಸೂಚಿಸಿದಲ್ಲಿ ಜೂನ್ 30ರವರೆಗೂ ಕೊಬ್ಬರಿ ಖರೀದಿ ಅವಧಿ ವಿಸ್ತರಣೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular