ಬೆಂಗಳೂರು : ಕೃಷ್ಣಾ ಮೇಲ್ದಂಡೆ’ ಯೋಜನೆಗೆ ಭೂ ಸ್ವಾಧೀನ ಪರಿಹಾರ ನಿಗದಿ ಮಾಡಿ ರಾಜ್ಯ ಸರ್ಕಾರದಿಂದ ಮಹತ್ವದ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.
ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂ ಸ್ವಾಧೀನ ಪರಿಹಾರ ನಿಗದಿ ಮಾಡಿದೆ. ಒಣ ಭೂಮಿಗೆ ಎಕರೆಗೆ 30 ಲಕ್ಷ ಹಾಗೂ ಕೃಷಿ ಭೂಮಿಗೆ ಎಕರೆಗೆ 40 ಲಕ್ಷ ರೂ ಪರಿಹಾರ ನಿಗದಿ ಮಾಡಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ , ಸಚಿವ ಕೆಜೆ ಜಾರ್ಜ್ ಸೇರಿದಂತೆ ಮತ್ತಿತರಿದ್ದರು.