BIG NEWS : ‘ಬೆಂಗಳೂರು ಕಾಲ್ತುಳಿತ ದುರಂತ’ದ ನೇರ ಹೊಣೆಯನ್ನು ರಾಜ್ಯ ಸರ್ಕಾರ ಹೊರಬೇಕು : ಸುಮಲತಾ ಆಗ್ರಹ

ಬೆಂಗಳೂರು : ಬೆಂಗಳೂರು ಕಾಲ್ತುಳಿತ ದುರಂತದ ನೇರ ಹೊಣೆಯನ್ನು ರಾಜ್ಯ ಸರ್ಕಾರ ಹೊರಬೇಕು ಎಂದು ಸುಮಲತಾ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ RCB ಸಂಭ್ರಮದ ವೇಳೆ ಸಂಭವಿಸಿದ ದುರಂತದಲ್ಲಿ ಮಂಡ್ಯದ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ಅವರ ಸಹಿತ ಅನೇಕರು ಮೃತರಾಗಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ.

ಸಂಭ್ರಮಾಚರಣೆಯ ಸಂದರ್ಭದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿರುವುದು ದುರದೃಷ್ಟಕರ. ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿರುವ ರಾಜ್ಯ ಸರ್ಕಾರ ಇದರ ನೇರ ಹೊಣೆಯನ್ನು ಹೊರಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸುತ್ತೇನೆ. ಹಾಗೆಯೇ, ಆರ್ಸಿಬಿ ಅಭಿಮಾನಿಗಳು ಪ್ರಾಣಾಪಾಯಕ್ಕೆ ಒಡ್ಡಿಕೊಳ್ಳುವ ಸಂಭ್ರಮಾಚರಣೆಯಲ್ಲಿ ತೊಡಗಬೇಡಿ ಎಂದು ವಿನಂತಿಸಿಕೊಳ್ಳುತ್ತೇನೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read