ಡಿಜಿಟಲ್ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನದಂತೆ ಸರ್ಕಾರ ರಚನೆ ನಂತರದ ಮೊದಲ ಸಚಿವ ಸಂಪುಟದಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನು ಅನುಷ್ಟಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿ ದೇಶದ ಇತರೆ ರಾಜ್ಯಗಳಿಗೂ ಮಾದರಿಯಾಗಿದೆ. ಜಾತಿ, ಧರ್ಮ, ಭಾಷೆಯ ಭೇಧವಿಲ್ಲದೆ ನಾಡಿನ ಎಲ್ಲ ಜನರ ಮನೆ ಮನೆಗಳಿಗೆ ಯೋಜನೆಗಳು ತಲುಪಿವೆ. ಪ್ರಗತಿಯತ್ತ ಕರ್ನಾಟಕ ರಾಜ್ಯ ಮುನ್ನೆಡೆದಿದೆ.
ಸರ್ಕಾರ ಈ ಐತಿಹಾಸಿಕ ಸಾಧನೆಯನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಮೇ.20ರಂದು ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮ ಹಕ್ಕು ಪತ್ರ ಸಮರ್ಪಣೆ ಮಾಡುವುದರೊಂದಿಗೆ ನೆಮ್ಮದಿ ಕಲ್ಪಿಸಲಾಗುತ್ತಿದೆ. ಎರಡು ವರ್ಷಗಳ ಸಾಧನೆಯನ್ನು ನಾಡಿನ ಜನರಿಗೆ ಸಮರ್ಪಣೆ ಮಾಡುವುದರೊಂದಿಗೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗುವ ಕಾರ್ಯಕ್ರಮದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡುವರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬೃಹತ್ ಕೈಗಾರಿಕೆ ಮತ್ತು ಉಕ್ಕು ಇಲಾಖೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ, ಜಲಶಕ್ತಿ ಮತ್ತು ರೈಲ್ವೆ ಸಚಿವ ವಿ.ಸೋಮಣ್ಣ, ಸೂಕ್ಷ್ಮ, ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣ ಸ್ವಾಮಿ ಭಾಗವಹಿಸುವರು.
ಲೋಕಸಭೆ ಸಂಸದರಾದ ಕೆ.ಸಿ.ವೇಣುಗೋಪಾಲ, ಪ್ರಿಯಾಂಕ ಗಾಂಧಿ ವಾದ್ರ, ರಾಜ್ಯ ಸಭೆ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯ ಸರ್ಕಾರದ ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹಾಗೂ ವಿಜಯನಗರ ಕ್ಷೇತ್ರ ಶಾಸಕ ಹೆಚ್.ಆರ್.ಗವಿಯಪ್ಪ ಉಪಸ್ಥಿತರಿರಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್, ಇಂಧನ ಸಚಿವ ಕೆ.ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಜವಳಿ, ಕಬ್ಬು, ಅಭಿವೃದ್ಧಿ ಹಾಗೂ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ್, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪ ದರ್ಶನಾಪುರ, ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಹಜ್ ಹಾಗೂ ಪೌರಾಡಳಿತ ಸಚಿವ ರಹೀಂಖಾನ್, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವಿ.ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ.ಎಸ್.ತಂಗಡಗಿ, ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ್.ಬಿ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ವೈದ್ಯ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಆಗಮಿಸಲಿದ್ದಾರೆ.
ಲೋಕಸಭಾ ಸಂಸದರಾದ ಈ.ತುಕಾರಾಮ್, ಡಾ.ಪ್ರಭಾ ಮಲ್ಲಿಕಾರ್ಜುನ್, ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ್, ಕೂಡ್ಲಿಗಿ ಶಾಸಕ ಡಾ.ಶ್ರೀನಿವಾಸ.ಎನ್.ಟಿ., ಹಡಗಲಿ ಶಾಸಕ ಕೃಷ್ಣನಾಯ್ಕ್, ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ವೈ.ಎಂ.ಸತೀಶ್, ಶಶೀಲ್.ಜಿ.ನಮೋಶಿ, ಹೊಸಪೇಟೆ ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್.ಎನ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಭೀಮಾನಾಯ್ಕ್ ಗೌರವ ಉಪಸ್ಥಿತರಿರುವರು.
ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹಾಗೂ ವಸತಿ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಗೌರವ ಆಹ್ವಾನಿತರಾಗಿ ಭಾಗವಹಿಸುವರು.
ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಣ ಹಾಗೂ ಸಾಮಾಜಿಕ ಭದ್ರತೆ ವಿಭಾಗದ ಸರ್ಕಾರ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್, ಕಂದಾಯ ಆಯುಕ್ತ ಪೆÇಮ್ಮಲ ಸುನೀಲ್ ಕುಮಾರ್, ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಜೆ.ಮಂಜುನಾಥ, ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿ.ಪಂ. ಸಿಇಓ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ , ಪೊಲೀಸ್ ವರಿಷ್ಟಾಧಿಕಾರಿ ಬಿ.ಎಲ್.ಶ್ರೀಹರಿಬಾಬು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಸ್ವಾಗತ ಬಯಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.