ಮೈಸೂರು : ಮಾರ್ಚ್ ಮೊದಲ ವಾರ ರಾಜ್ಯ ಸರ್ಕಾರದ ಬಜೆಟ್ ( Budget 2026) ಮಂಡಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ಏರ್ ಪೋರ್ಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಮಾರ್ಚ್ ಮೊದಲ ವಾರ ಬಜೆಟ್ ಮಂಡಿಸಲಾಗುತ್ತದೆ. ಈ ಬಗ್ಗೆ ಶೀಘ್ರವೇ ಪ್ರಕಟ ಮಾಡುತ್ತೇವೆ. ಇದಕ್ಕೂ ಮುನ್ನ ಹಾಸನದಲ್ಲಿ ಸಾಧನಾ ಸಮಾವೇಶ ನಡೆಸುತ್ತೇವೆ ಎಂದರು.
ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಈ ಬಗ್ಗೆ ನಾನು ಮಾತನಾಡಬೇಕು ಅಥವಾ ಡಿಕೆ ಶಿವಕುಮಾರ್ ಮಾತನಾಡಬೇಕು. ಶಾಸಕರಿಗೇನು ಗೊತ್ತಿರುತ್ತದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ ನಾವು ಬದ್ಧ ಎಂದರು. ನಾಳೆ ವಿಶೇಷ ಕ್ಯಾಬಿನೆಟ್ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡುತ್ತೇವೆ. ನಾನು ದೆಹಲಿಗೆ ಹೋಗುತ್ತಿಲ್ಲ ಎಂದರು.
ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಸಿಎಂ ಸಿದ್ದರಾಮಯ್ಯ ಪ್ರೀತಿಯಿಂದ ಬರಮಾಡಿಕೊಂಡು ಶುಭ ಹಾರೈಸಿದರು.ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.
ಬಿಜೆಪಿ ಪಕ್ಷ ನಿತ್ಯವೂ ಗಾಂಧಿ ಚಿಂತನೆಗಳನ್ನು ಕೊಲ್ಲುತ್ತಿದೆ
ಕೇಂದ್ರ ಸರ್ಕಾರವು ಮನರೇಗಾ ಯೋಜನೆಯನ್ನು ರದ್ದು ಮಾಡುವ ಮೂಲಕ ಗ್ರಾಮೀಣ ಭಾರತದ ಕೋಟ್ಯಂತರ ಬಡಜನರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ. ಅಂದು ನಾಥೂರಾಮ್ ಗೋಡ್ಸೆ ಗುಂಡಿಟ್ಟು ಮಹಾತ್ಮ ಗಾಂಧಿಯವರನ್ನು ಹತ್ಯೆಗೈದರೆ, ಇಂದಿನ ಸಂಘ ಪರಿವಾರ ಮತ್ತು ಬಿಜೆಪಿ ಪಕ್ಷ ನಿತ್ಯವೂ ಗಾಂಧಿ ಚಿಂತನೆಗಳನ್ನು ಕೊಲ್ಲುತ್ತಿದೆ. ಇದರ ವಿರುದ್ಧ ನಾವು ಧ್ವನಿಯೆತ್ತದೆ ಹೋದರೆ ದೇಶದ್ರೋಹವಾಗುತ್ತದೆ. ಕಾಂಗ್ರೆಸ್ ಪಕ್ಷ ಗಾಂಧಿ ಭಾರತದ ಉಳಿವಿಗಾಗಿ, ಗ್ರಾಮ ಸ್ವರಾಜ್ಯಕ್ಕಾಗಿ ದೊಡ್ಡ ಮಟ್ಟದ ಹೋರಾಟಕ್ಕೆ ಸಿದ್ಧವಾಗುತ್ತಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು “ಮನರೇಗಾ ಉಳಿಸಿ” ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದೆವು. ಮನರೇಗಾ ಮರುಜಾರಿಯಾಗುವ ವರೆಗೆ ನಾವು ವಿರಮಿಸುವುದಿಲ್ಲ ಎನ್ನುವ ಸಂಕಲ್ಪಗೈದಿದ್ದೇವೆ ಎಂದು ಸಿಎಂ ಹೇಳಿದರು.

