HomeKarnatakaBIG NEWS: ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್

BIG NEWS: ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಸಹಾಯಕ ಗ್ರಂಥಪಾಲಕರ ವೇತನ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿದೆ.

ಸರ್ಕಾರಿ ಸಹಾಯಕ ಗ್ರಂಥಪಾಲಕರ ವೇತನ ತಾರತಮ್ಯ ವಿಚಾರ ಸರಿಪಡಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಪಾಲಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈಕೋರ್ಟ್ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಎ.ಬಿ.ನಾಗಮಣಿ ಎಂಬುವವರು ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿದ್ದರು. ಕೋರ್ಟ್ ಆದೇಶವನ್ನು ಗಂಭೀರವಾಗಿ ಪರಿಗಣಿಸದ ಸರ್ಕಾರದ ನಡೆಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಸಿಜೆ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ಣ ದೀಕ್ಷಿತ್ ಪೀಠ, ಕೋರ್ಟ್ ಆದೇಶ ತಮಾಷೆ ಎಂದುಕೊಂಡಿದ್ದೀರಾ? ಕೋರ್ಟ್ ಮೆಟ್ಟಿಲೇರುವುದು ಜನರಿಗೆ ಖುಷಿಕೊಡುವುದಿಲ್ಲ. ಮೂರು ವಾರಗಳಲ್ಲಿ ದಂಡ ಪಾವತಿ ಮಾಡುವಂತೆ ಆದೇಶ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular