BIG NEWS : ನಾಳೆ ʻರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನʼ : ಸರ್ಕಾರಿ ನೌಕರರಿಗೆ 2 ದಿನ ವಿಶೇಷ ‘ಸಾಂದರ್ಭಿಕ ರಜೆʼ ..!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸದರಿ ಸಮ್ಮೇಳನ ಹಾಗೂ ಆಡಳಿತದಲ್ಲಿ ಕಾರ್ಯಕ್ರಮತೆ ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ ಸೀಮಿತಗೊಳಿಸಿ ಬೆಂಗಳೂರು ನಗರ ಜಿಲ್ಲೆಯ ಅಧಿಕಾರಿ/ನೌಕರರಿಗೆ ದಿನಾಂಕ: 27.02.2024 ರಂದು ಒಂದು ದಿನ ಹಾಗೂ ಇತರೆ ಜಿಲ್ಲೆಗಳ ಅಧಿಕಾರಿ/ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ: 27.02.2024 ಮತ್ತು 28.02.2024 ಗಳಂದು 2 ದಿನಗಳ ವಿಶೇಷ ಸಾಂದರ್ಭಿಕ ರಜೆಯನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ.

ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಅಧಿಕಾರಿ/ಸಿಬ್ಬಂದಿಗಳಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024 ರಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ.

ಮುಂದುವರೆದು, ನಿಗಮ-ಮಂಡಳಿ, ನಗರ ಪಾಲಿಕೆಗಳು, ಪ್ರಾಧಿಕಾರಗಳು, ಸ್ವಾಯತ್ತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸಮ ಸಂಖ್ಯೆಯ ಸುತ್ತೋಲೆ ದಿನಾಂಕ: 14.02.2024 ರಲ್ಲಿ ತಿಳಿಸಿರುವ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಆಯಾಯ ಸಂಸ್ಥೆಯು ತಮ್ಮ ಹಂತದಲ್ಲಿ ಪರಿಶೀಲಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳತಕ್ಕದ್ದು ಎಂದು ಸೂಚನೆ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read