ʻಶಿಶುಗಳ ಮರಣ ಪ್ರಮಾಣʼ ಇಳಿಕೆಗೆ ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ʻತುರ್ತು ಸೇವೆ ಆಂಬ್ಯುಲೆನ್ಸ್ʼ ಗೆ ಚಾಲನೆ

ಬೆಂಗಳೂರು :  ರಾಜ್ಯದಲ್ಲಿ ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಇಂದು ಆರೋಗ್ಯಸೌಧದಲ್ಲಿ ನೂತನ 4 ʼನವಜಾತ ಶಿಶು ತುರ್ತು ಸೇವೆ ಆಂಬ್ಯುಲೆನ್ಸ್ʼ ಗೆ ಸಚಿವ ದಿನೇಶ್‌ ಗುಂಡೂರಾವ್ ಚಾಲನೆ ನೀಡಿದೆ.

ಆರೋಗ್ಯ ಇಲಾಖೆಯ ಈ ಹೊಸ ಆಂಬ್ಯುಲೆನ್ಸ್‌ ಸೇವೆಯಿಂದ ಅವಧಿಪೂರ್ವವಾಗಿ ಜನಿಸುವ ಮಗು ಮತ್ತು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯಬಹುದು‌ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ ವಿಭಾಗಗಳಲ್ಲಿ ʼನವಜಾತ ಶಿಶು ತುರ್ತು ಸೇವೆ ಆಂಬ್ಯುಲೆನ್ಸ್ʼ ಗಳನ್ನು ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸೇವೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ ಎಂದು ಹೇಳಿದ್ದಾರೆ.

ವೆಂಟಿಲೇಟರ್‌, ಇನ್ಕ್ಯುಬೇಟರ್‌, ವಿಶೇಷ ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿ, ಸುಧಾರಿತ ಜೀವ ರಕ್ಷಕ ಸಾಧನಗಳನ್ನು ಈ ಆಂಬ್ಯುಲೆನ್ಸ್‌ ಒಳಗೊಂಡಿರುತ್ತದೆ. ಈ ಮೂಲಕ ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳನ್ನು ಸುಧಾರಿಸುವಲ್ಲಿ ಮಹತ್ತರ ಕಾರ್ಯಸಾಧನೆಯಾಗಲಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read