ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಈ ವಿಷಯ ತಿಳಿಸಿದರು.
ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಕಳೆದ ವರ್ಷ 10% ಶುಲ್ಕ ಹೆಚ್ಚಳವಾಗಿತ್ತು. ಈ ವರ್ಷದಲ್ಲಿ ಯಾವುದೇ ಹೆಚ್ಚಳವಿಲ್ಲ. ಈ ಕುರಿತು ಒಪ್ಪಂದಕ್ಕೆ ಅತಿ ಶೀಘ್ರದಲ್ಲೇ ಸಹಿ ಹಾಕಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.