HomeKarnatakaರಾಜ್ಯದಲ್ಲಿ ಮೂರು ದಿನ 11 ಸೆಂ.ಮೀ.ವರೆಗೆ ಭಾರಿ ಮಳೆ ಮುನ್ಸೂಚನೆ: ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’...

ರಾಜ್ಯದಲ್ಲಿ ಮೂರು ದಿನ 11 ಸೆಂ.ಮೀ.ವರೆಗೆ ಭಾರಿ ಮಳೆ ಮುನ್ಸೂಚನೆ: ವಿವಿಧ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಆಗುವ ಸಂಭವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ನವೆಂಬರ್ 1ರಂದು ದಕ್ಷಿಣ ಒಳನಾಡಿನ ರಾಮನಗರ, ಚಾಮರಾಜನಗರ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ 6ರಿಂದ 11 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್ 2 ರಂದು ರಾಮನಗರ, ಮಂಡ್ಯ, ಚಾಮರಾಜನಗರ, ಕೊಡಗು, ಮೈಸೂರು, ನವೆಂಬರ್ 3ರಂದು ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಳಿದಂತೆ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ನವೆಂಬರ್ 5ರ ನಂತರ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular