ಗಮನಿಸಿ : ಫೆ.26, 27 ರಂದು ರಾಜ್ಯಮಟ್ಟದ ಉದ್ಯೋಗ ಮೇಳ ; ಈ ರೀತಿಯಾಗಿ ಹೆಸರು ರಿಜಿಸ್ಟರ್ ಮಾಡ್ಕೊಳ್ಳಿ..!

ಬೆಂಗಳೂರು : ಫೆ.26, 27 ರಂದು ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಅರಮನೆ ಮೈದಾನ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಈ ಉದ್ಯೋಗ ಮೇಳದಲ್ಲಿ ಸುಮಾರು 500 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಇತರೆ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೊಂದಣಿ ಮಾಡಿಕೊಳ್ಳಬಹುದು.

ಸಿಎಂ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಉನ್ನತ ಶಿಕ್ಷಣ, ಬೃಹತ್ ಕೈಗಾರಿಕೆ, ಕೌಶಲ್ಯಾಭಿವೃದ್ದಿ ಇಲಾಖೆ, ಯುವಸಬಲೀಕರಣ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇತ್ಯಾದಿಗಳು) ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಆ ಸಮಿತಿ ಮಾರ್ಗದರ್ಶನದಂತೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಿದ್ದಾರೆ.

ನೊಂದಣಿ ಹೇಗೆ:

ಆಸಕ್ತ ಅಭ್ಯರ್ಥಿಗಳು https://skillconnect.kaushalkar.com/ ನಲ್ಲಿ ಹೆಸರು ನೊಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ನೊಂದಣಿ ಹಂತಗಳು..!

ಹಂತ 1 : https://skillconnect.kaushalkar.com/new ಭೇಟಿ ನೀಡಿ
ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ
ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ
ಹಂತ 5 : ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read