ಇಂದು ರಾಜ್ಯಮಟ್ಟದ ಜನಸ್ಪಂದನಾ ಕಾರ್ಯಕ್ರಮ ; 36 ಪ್ರತ್ಯೇಕ ಕೌಂಟರ್ ಓಪನ್

ಬೆಂಗಳೂರು : ಇಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದ್ದು, ವಿಧಾನಸೌಧದ ಎದುರು ಜನರು ಜಮಾಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಳಿ ತಮ್ಮ ತಮ್ಮ ಅಹವಾಲುಗಳು, ದೂರುಗಳನ್ನು ಸಲ್ಲಿಸಲು ವಿಧಾನಸೌಧದ ಎದುರು ಜಮಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆವರೆಗೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯ ಮಟ್ಟದ ಎರಡನೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್ಗಳನ್ನು ಮಾಡಲಾಗಿದೆ. ಇದಕ್ಕಾಗಿ  36 ಕೌಂಟರ್ ಗಳನ್ನು ಓಪನ್ ಮಾಡಲಾಗಿದೆ. ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read