HomeLatest Newsಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 2025-26ನೇ ಸಾಲಿನ ರಾಜ್ಯಮಟ್ಟದ ಪೂರ್ವಸಿದ್ಧತಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 2025-26ನೇ ಸಾಲಿನ ರಾಜ್ಯಮಟ್ಟದ ಪೂರ್ವಸಿದ್ಧತಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2025-26ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆ 1, 2, 3ರ ವೇಳಾಪಟ್ಟಿ ಪ್ರಕಟಿಸಿದೆ.

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ 3 ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಲ್ಲಿ www.kseab.karnataka.gov.in ಪ್ರಕಟಿಸಲಾಗಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಗಳ ವೇಳಾಪಟ್ಟಿಗಳನ್ನು ಮಂಡಲಿಯ ಜಾಲತಾಣದಿಂದ ಡೌನ್‌ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಲು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular