ತುಮಕೂರು ಜಿಲ್ಲೆಯಲ್ಲಿ ಅ.27 ರಿಂದ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಧಾರವಾಡ : 2022-23 ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಅ.27 ರಿಂದ ಅ.29 ರವರೆಗೆ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ.

ಧಾರವಾಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು.

ಅ.27 ಮಧ್ಯಾಹ್ನ 1 ಘಂಟೆಯೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ, ತುಮಕೂರು ಇಲ್ಲಿ ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಧಾರವಾಡ ದೂರವಾಣಿ ಸಂಖ್ಯೆ: 0836-2447424 ಸಂಪರ್ಕಿಸಬಹುದೆಂದು ಕಚೇರಿ ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read