HomeIndiaರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಯಾವುದೇ ಯೋಜನೆ ಅಡಿಯಲ್ಲಿ ಪರಿಗಣಿಸದ ಕಾರಣ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ...

ರಾಜ್ಯಕ್ಕೆ ಶಾಕಿಂಗ್ ನ್ಯೂಸ್: ಯಾವುದೇ ಯೋಜನೆ ಅಡಿಯಲ್ಲಿ ಪರಿಗಣಿಸದ ಕಾರಣ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಇಲ್ಲ

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಮಂಜೂರು ಮಾಡುವುದಿಲ್ಲ ಎಂದು ಕೇಂದ್ರದಿಂದ ಸ್ಪಷ್ಟನೆ ನೀಡಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರವು ಯಾವುದೇ ಯೋಜನೆ ಅಡಿಯಲ್ಲಿ ಪರಿಗಣಿಸಿಲ್ಲ. ಹಾಗಾಗಿ ಯೋಜನೆಗೆ ಅನುದಾನ ಮಂಜೂರು ಮಾಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ ಒತ್ತಾಯಿಸುತ್ತಿದೆ. ಯೋಜನೆಯ ಮೌಲ್ಯಮಾಪನ ಮಾಡಿರುವ ಸಾರ್ವಜನಿಕ ಹೂಡಿಕೆ ಮಂಡಳಿ 5300 ಕೋಟಿ ರೂ. ಕೇಂದ್ರದ ಅನುದಾನಕ್ಕೆ ಶಿಫಾರಸು ಮಾಡಿದೆ. 2023 -24ರ ಕೇಂದ್ರ ಬಜೆಟ್ ನಲ್ಲಿ ಅನುದಾನ ಒದಗಿಸಲಾಗಿದೆ. ಆದರೆ, ಸಚಿವಾಲಯದ ಚಾಲ್ತಿಯಲ್ಲಿರುವ ಯೋಜನೆಗಳ ಅಡಿಯಲ್ಲಿ ಭಾಗಶಃ ಹಣಕಾಸಿನ ನೆರವಿಗಾಗಿ ಯೋಜನೆಯನ್ನು ಸೇರಿಸಲು ಯೋಜನೆಯ ಪರಿಷ್ಕೃತ ಹಣಕಾಸಿನ ವಿವರಗಳನ್ನು ಒದಗಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆ ಹನಿ ನೀರಾವರಿ ಮೂಲಕ ಬರಪೀಡಿತ ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ 2.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ ಗುರಿ ಹೊಂದಿದ್ದು, ಯೋಜನೆಯ ಮೂಲಕ 367 ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಸಚಿವರ ಗಮನ ಸೆಳೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular