HomeKarnatakaರಾಜ್ಯದಲ್ಲಿ ಸೈಬರ್ ವಂಚನೆಗೊಳಗಾದವರ ನೆರವಿಗೆ ವಿಶೇಷ ಸಹಾಯವಾಣಿ, ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ರೌಡಿ ನಿಗ್ರಹ...

ರಾಜ್ಯದಲ್ಲಿ ಸೈಬರ್ ವಂಚನೆಗೊಳಗಾದವರ ನೆರವಿಗೆ ವಿಶೇಷ ಸಹಾಯವಾಣಿ, ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ರೌಡಿ ನಿಗ್ರಹ ಪಡೆ ರಚನೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿ ನೂರು ದಿನಗಳಾದ ಈ ಸುಸಂದರ್ಭದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಹಲವು ಮಹತ್ವದ ಪ್ರಗತಿಯ ಹೆಜ್ಜೆಗಳನ್ನು ಇರಿಸಲಾಗಿದ್ದು, ವಿನೂತನ ಜನಸ್ನೇಹಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹೊಸ ಚೈತನ್ಯದೊಂದಿಗೆ, ಹೊಸ ಉತ್ಸಾಹದೊಂದಿಗೆ, ಹೊಸ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿರುವ ನಮ್ಮ ಸರ್ಕಾರವು ಮಣ್ಣಿನ ಮಕ್ಕಳ ನೆರವಿಗೆ ‘ಮುಖ್ಯಮಂತ್ರಿ ನೇಗಿಲ ಯೋಗಿ’ ಕಾರ್ಯಕ್ರಮ, ಶೈಕ್ಷಣಿಕ ಬಲವರ್ಧನೆಗೆ ಉಚಿತ ಬಸ್ ಪಾಸ್, ‘ಸಿಎಂ ವಿದ್ಯಾರ್ಥಿ ಹಸ್ತ’ದಂತಹ ಉತ್ತೇಜನಾತ್ಮಕ ಕಾರ್ಯಕ್ರಮ, ಯುವ ಸಬಲೀಕರಣಕ್ಕೆ ಉದ್ಯೋಗ ನಿಧಿ, ಭಾರತ್ ಜೋಡೋ ಸಂಘ, ತಂತ್ರಜ್ಞಾನ ಕ್ಷೇತ್ರದ ನಾಯಕತ್ವಕ್ಕಾಗಿ ಎಐ ವಿಶ್ವವಿದ್ಯಾಲಯ, ಗ್ಲೋಬಲ್ ಟೆಕ್ನಾಲಜಿ ಸೆಂಟರ್‌ಗಳು, ರಾಜ್ಯದ ಪ್ರಗತಿಗೆ ವೇಗ ನೀಡಲು ಉತ್ಪಾದನಾ ಕ್ಲಸ್ಟರ್‌ಗಳು, ಬಿಯಾಂಡ್ ಬೆಂಗಳೂರಿನಂತಹ ಕಾರ್ಯಕ್ರಮಗಳು, ಜನಸ್ಪಂದನೆಗಾಗಿ ಪ್ರಜಾಸೇವಾ ಕಾರ್ಯಕ್ರಮ- ಹೀಗೆ ಸರ್ವರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗಾಗಿ ನೂರು ದಿನಗಳಲ್ಲಿ ನೂರಾರು ಪ್ರಗತಿಯ ಹೆಜ್ಜೆಗಳನ್ನು ಇಡಲಾಗಿದೆ.

ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ರಾಜ್ಯದ ಗೃಹ ಇಲಾಖೆಯು #RISE ಕರ್ನಾಟಕ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಾದಕವಸ್ತುಗಳ ಪಿಡುಗಿನ ವಿರುದ್ಧ ಸಮರ ಸಾರಲಾಗಿದೆ. #ಬೇಡBRO ಎಂಬ ಜಾಗೃತಿಯ ಅಭಿಯಾನದ ಮೂಲಕ ಮಾದಕವಸ್ತುಗಳ ವಿರುದ್ಧ ಕಾರ್ಯಾಚರಣೆಗೆ ವಿಶೇಷ ಒತ್ತು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2026ರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ 1,999 NDPS ಪ್ರಕರಣಗಳನ್ನು ದಾಖಲಿಸಿ, 807 ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ.

ಸೈಬರ್ ವಂಚನೆಗೆ ಒಳಗಾದವರ ನೆರವಿಗಾಗಿ ವಿಶೇಷ ಸಹಾಯವಾಣಿ ತೆರೆಯಲಾಗಿದೆ. ಸಂಚಾರ ದಟ್ಟಣೆಯ ನಿರ್ವಹಣೆಗಾಗಿ ವಿಶೇಷ ಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆಗಳನ್ನು ರಚಿಸಲಾಗುತ್ತಿದ್ದು, ಸ್ವಸ್ಥ ಮತ್ತು ಭಯಮುಕ್ತ ವಾತಾವರಣವನ್ನು ಖಾತರಿಪಡಿಸಲಾಗುವುದು.

ಭಾರತದ ಮೊದಲ ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ರಮ ವಹಿಸಲಾಗಿದೆ. AI ಶಿಕ್ಷಣ, AI ನೀತಿ, AI ಹಬ್, ಗ್ರೀನ್ ಡೇಟಾ ಸೆಂಟರ್ ನೀತಿ, ಡ್ರೋನ್ ಉನ್ನತಿ ಕೇಂದ್ರ, ಇವಿ ಉನ್ನತಿ ಕೇಂದ್ರಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರುವಂತಹ ಕಾರ್ಯಕ್ರಮಗಳಾಗಿವೆ.

ನಮ್ಮ ಸರ್ಕಾರದ ನೂರು ದಿನಗಳ ಈ ಸಾಧನೆಗಳು ಮುಂದಿನ ದಿನಗಳಲ್ಲಿ ಇಮ್ಮಡಿಯಾದ ವೇಗದೊಂದಿಗೆ ಮುನ್ನಡೆಯಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಾದಕ ವಸ್ತುಗಳ ವಿರುದ್ಧ ನಮ್ಮ ಸಮರ ನಿರಂತರ: ₹24.22 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

ಯುವಜನರ ಭವಿಷ್ಯವನ್ನು ಕತ್ತಲೆಗೆ ತಳ್ಳುವ ಮಾದಕ ವಸ್ತುಗಳ ಜಾಲವನ್ನು ಮಟ್ಟಹಾಕಲು ಕರ್ನಾಟಕ ಸರ್ಕಾರ ಹಾಗೂ ಪೊಲೀಸ್‌ ಇಲಾಖೆಯ ಕಾರ್ಯ ನಿರಂತರವಾಗಿರಲಿದೆ.

ಬೆಂಗಳೂರು ಪೊಲೀಸರ ಮಹತ್ವದ ಕಾರ್ಯಾಚರಣೆಯಲ್ಲಿ 11 ಕೆಜಿ ಎಂಡಿಎಂಎ, 2 ಕೆಜಿ ಹೈಡ್ರೋಗಾಂಜಾ ಹಾಗೂ 10 ಕೆಜಿ ಗಾಂಜಾ ಸೇರಿದಂತೆ ಒಟ್ಟು ₹24.22 ಕೋಟಿ ಮಾರುಕಟ್ಟೆ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ 05 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಮಾದಕ ವಸ್ತುಗಳ ಮಾರಾಟ, ಸಾಗಣೆ ಹಾಗೂ ಜಾಲದ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ. ನಮ್ಮ ಗುರಿ ಕೇವಲ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವುದಲ್ಲ; ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆದು, ನಮ್ಮ ಯುವಜನತೆಗೆ ಸುರಕ್ಷಿತ ಮತ್ತು ಆರೋಗ್ಯಕರ ಭವಿಷ್ಯವನ್ನು ನಿರ್ಮಿಸುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular