ALERT : ರಾಜ್ಯದ ‘ಪಡಿತರ ಚೀಟಿ’ದಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ರದ್ದಾಗುತ್ತೆ ನಿಮ್ಮ ‘ರೇಷನ್ ಕಾರ್ಡ್’.!

ಬೆಂಗಳೂರು : ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ. ರೇಷನ್ ಕಾರ್ಡ್ ಸಂಬಂಧ ಸರ್ಕಾರ ನೀಡುವ ಸೂಚನೆಗಳನ್ನು ತಪ್ಪದೇಪಾಲಿಸಬೇಕು.

ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ. ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ. ಆದ್ದರಿಂದ ತಪ್ಪದೇ ಇಕೆವೈಸಿ ಮಾಡಿಸಿ.

ಪಡಿತರ ಪಡೆಯದೇ ಇದ್ರೆ ರೇಷನ್ ಕಾರ್ಡ್ ರದ್ದು
6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದು., ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸಮೀಕ್ಷೆ ಕಾರ್ಯ ಆರಂಭವಾಗಿದೆ. ಸರ್ಕಾರದ ಇತರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪಡಿತರ ಚೀಟಿಯ ಸಮೀಕ್ಷೆ ನಡೆಸಲು ಆಹಾರ ಇಲಾಖೆ ಮುಂದಾಗಿದೆ.

ಅನ್ನಭಾಗ್ಯದ ಅಕ್ಕಿ ಮಾರಿದ್ರೆ ಕೇಸ್
ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಮಾರಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಹೌದು. ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read