ಮತಗಳ್ಳತನದ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭ : ಸಚಿವ ಮಧು ಬಂಗಾರಪ್ಪ

ಮತಗಳ್ಳತನದ ವಿರುದ್ಧ ಆರಂಭವಾಗಿರುವ ಈ ಪ್ರತಿಭಟನಾ ಅಭಿಯಾನ ಕರ್ನಾಟಕ ರಾಜ್ಯದಿಂದ ಆರಂಭವಾಗಿ ಇಡೀ ದೇಶಾದ್ಯಂತ ವ್ಯಾಪಿಸಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು .

ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಯವರು ದೇಶದಾದ್ಯಂತ ಹಮ್ಮಿಕೊಂಡಿರುವ “ವೋಟ್ ಚೋರ್ ಗದ್ದಿ ಚೋಡ್” ಅಭಿಯಾನಕ್ಕೆ ಬೆಂಬಲವಾಗಿ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದ ಎದುರು ಇಂದು ಹಮ್ಮಿಕೊಂಡಿದ್ದ “ಮತಗಳ್ಳತನ ವಿರುದ್ಧ ಅಭಿಯಾನ” ದಲ್ಲಿ ಪಾಲ್ಗೊಂಡು, ಮತಗಳ್ಳತನದ ಕುರಿತು ಮಾತನಾಡಿದೆನು.

ವಿರೋಧ ಪಕ್ಷದ ಸಮರ್ಥ ನಾಯಕರಾಗಿ ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ. ಮತಗಳ್ಳತನದ ವಿರುದ್ಧ ಆರಂಭವಾಗಿರುವ ಈ ಪ್ರತಿಭಟನಾ ಅಭಿಯಾನ ಕರ್ನಾಟಕ ರಾಜ್ಯದಿಂದ ಆರಂಭವಾಗಿ ಇಡೀ ದೇಶಾದ್ಯಂತ ವ್ಯಾಪಿಸಲಿದೆ.

ಈಗಾಗಲೇ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆಯೇ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ತಿಳಿಸಿ, ಸಹಿ ಹಾಕುವ ಮೂಲಕ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರು, ಮುಖಂಡರು, ಮಹಿಳಾ ಮುಖಂಡರು, ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ನಾಯಕರು, ಕಾರ್ಯಕರ್ತ ಮಿತ್ರರು ಹಾಜರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read