HomeKarnatakaನಾಳೆಯಿಂದ ರಾಜ್ಯಾದ್ಯಂತ ಸ್ಥಿರಾಸ್ತಿ ನೋಂದಣಿಗೆ ಇ-ಆಸ್ತಿ ಕಡ್ಡಾಯ

ನಾಳೆಯಿಂದ ರಾಜ್ಯಾದ್ಯಂತ ಸ್ಥಿರಾಸ್ತಿ ನೋಂದಣಿಗೆ ಇ-ಆಸ್ತಿ ಕಡ್ಡಾಯ

ಬೆಂಗಳೂರು: ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಮಾಡಲಾಗಿದ್ದು, ಅ. 7ರಿಂದ ರಾಜ್ಯಾದ್ಯಂತ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿಯಾಗಲಿದೆ.

ನಗರಾಭಿವೃದ್ಧಿ ಇಲಾಖೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿ:23/09/2024ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ.

2024ರ ಅಕ್ಟೋಬರ್ 07 ರಿಂದ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಗರ ಪ್ರದೇಶಗಳಲ್ಲಿ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ, 2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯಬಹುದು. ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ. ನೈಜ ಮಾಲೀಕರಿಗೆ ವಂಜಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸಬಹುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ಸುಲಭ ಸಾಧ್ಯ.  ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದೆ.  ಆದ್ದರಿಂದ ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗಪಡೆದುಕೊಳ್ಳುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular