ಭುಗಿಲೆದ್ದ ‘ಕಾವೇರಿ’ ಕಿಚ್ಚು : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು : ತಮಿಳುನಾಡಿಗೆ ‘ಕಾವೇರಿ’ ನೀರು ಬಿಡುವುದನ್ನು ನಿಲ್ಲಿಸದಿದ್ರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯವನ್ನು ಆಳುವ ನೈತಿಕತೆ ಸರ್ಕಾರಕ್ಕೆ ಇಲ್ಲ. ಕಾವೇರಿ ಹೋರಾಟವನ್ನು ಯಾರೇ ಮಾಡಿದರೂ ಅದಕ್ಕೆ ಬಿಜೆಪಿ ಬೆಂಬಲ ಕೊಡುತ್ತದೆ. ಹೇಡಿ ನಿರ್ಧಾರ ವಾಪಸ್ ಪಡೆಯುವಂತೆ ನಾವು ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು. ಸರ್ಕಾರ ಈ ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪ್ತಿ ಹೋರಾಟ ನಡೆಸಲಾಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು, ಮಂಡ್ಯ, ಮದ್ದೂರು ಭಾಗದಲ್ಲಿ ಅನ್ನದಾತನ ಆಕ್ರೋಶ ತೀವ್ರ ಸ್ವರೂಪ ಪಡೆದಿದೆ. ಸೆ.26 ರಂದು ಬೆಂಗಳೂರು ಬಂದ್ ಗೆ ಕೂಡ ಕರೆ ನೀಡಲಾಗಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಘನತೆಯನ್ನು ಹಾಳು ಮಾಡುತ್ತಿದೆ. ಯೋಗ್ಯತೆ ಇದ್ದರೆ ರಾಜಧಾನಿಯ ಸಮಸ್ಯೆ ಬಗೆಹರಿಸಲಿ, ಇಲ್ಲದಿದ್ದರೆ ರಾಜಿನಾಮೆ ನೀಡಲಿ. ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ನೆಲ, ಜಲ ರಕ್ಷಣೆಯ ವಿಚಾರದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.

https://twitter.com/BJP4Karnataka/status/1705501716073070772

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read