HomeKarnatakaBIG NEWS : ಡಿ.31 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ...

BIG NEWS : ಡಿ.31 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ.!

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ.ಬೆಳಗಾವಿಯಲ್ಲಿ  ಡಿಸೆಂಬರ್  9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಂದು ಸಾರಿಗೆ ನೌಕರರು ಬೆಳಗಾವಿ ಚಲೋ ಮೂಲಕ ಸರ್ಕಾರಕ್ಕೆ ಬಿಸಿಮುಟ್ಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನೋಟಿಸ್ ನೀಡಲಾಗುತ್ತದೆ.

ಕೈಗಾರಿಕಾ ವಿವಾದ ಕಾಯಿದೆ ಸೆಕ್ಷನ್ 27ರ ಪ್ರಕಾರ ಮುಷ್ಕರಕ್ಕೂ ಮುನ್ನ 21 ದಿನಗಳ ಮೊದಲು ನೋಟಿಸ್ ನೀಡಬೇಕು. ಹಾಗಾಗಿ ಡಿಸೆಂಬರ್ 9ರಂದು ನೋಟಿಸ್ ನೀಡಲಾಗುತ್ತಿದೆ. ಬಳಿಕ ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ ಆರಂಭಿಸಲಾಗುತ್ತದೆ.6 ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, 6 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿವೆ. ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular