BIG NEWS: 3 ಷರತ್ತಿನೊಂದಿಗೆ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆಗೆ ಅಸ್ತು

ಬೆಂಗಳೂರು: ಗೇರುಸೊಪ್ಪ ಮತ್ತು ಲಿಂಗನಮಕ್ಕಿ ಜಲಾಶಯಗಳ ನಡುವೆ ಶರಾವತಿ ವನ್ಯಜೀವಿಧಾಮ ಅರಣ್ಯ ಪ್ರದೇಶದಲ್ಲಿ ನಡೆಯಲಿರುವ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನೆ ಯೋಜನೆ ಕಾಮಗಾರಿಗೆ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಉತ್ಪಾದನೆ ಯೋಜನೆಗೆ ಷರತ್ತುಬದ್ಧ ಅನುಮೋದನೆ ನೀಡಲಾಗಿದೆ.

ಪರಿಸರದ ಮೇಲಿನ ಹಾನಿಯನ್ನು ಗಣನೀಯವಾಗಿ ತಗ್ಗಿಸುವ ಮತ್ತು ಸಿಂಹ ಬಾಲದ ಸಿಂಗಳೀಕಗಳ ಆವಾಸ್ಥಾನದ ಸಂರಕ್ಷಣೆ, ಅವುಗಳ ಇರುವುವಿಕೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂಬ ಷರತ್ತಿನೊಂದಿಗೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಅನುಮತಿ ನೀಡಲು ಮಂಡಳಿ ಸಮ್ಮತಿಸಿದೆ.

ಯೋಜನೆಯ ಸಾಧಕ ಬಾಧಕದ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗಿದ್ದು, ಅಂತಿಮವಾಗಿ ವಿದ್ಯುತ್ ಉತ್ಪಾದನೆಗೆ ಒತ್ತು ನೀಡುವ ದೃಷ್ಟಿಯಿಂದ ಯೋಜನೆ ಕೈಗೆತ್ತಿಕೊಳ್ಳುವುದು ಸೂಕ್ತ. ಆದರೆ ಮರ ಕಡಿಯುವ ಪ್ರಮಾಣ ಕಡಿಮೆ ಮಾಡಬೇಕು. ಅಪರೂಪದ ವನ್ಯಮೃಗಗಳು ಮತ್ತು ಸಸ್ಯ ಪ್ರಭೇದಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎನ್ನುವ ಷರತ್ತು ವಿಧಿಸಲು ತೀರ್ಮಾನಿಸಲಾಗಿದೆ.

ಶರಾವತಿ ಪಂಪ್ಡ್ ಸ್ಟೋರೇಜ್ ಮೂಲಕ 2000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯಿದೆ. ಈ ಉದ್ದೇಶಕ್ಕೆ ಹೊಸ ಜಲಾಶಯ ನಿರ್ಮಾಣ ಮಾಡುತ್ತಿಲ್ಲ. ಬದಲಾಗಿ ಹಾಲಿ ಇರುವ ಜಲಾಶಯಗಳ ನೀರನ್ನೆ ಬಳಕೆ ಮಾಡಲಾಗುವುದು. ಆದರೆ ಪೈಪ್ಲೈನ್ ಮತ್ತು ಮೂಲಸೌಕರ್ಯಗಳಿಗೆ 125 ಎಕರೆ ಸ್ವಾಧೀನ ಪಡಿಸಿಕೊಳ್ಳಬೇಕಿದೆ. ಜೊತೆಗೆ 16,000 ಮರಗಳ ಕಟಾವು ಮಾಡಬೇಕಾಗುತ್ತದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read