HomeKarnatakaರಾಹುಲ್ ಗಾಂಧಿ ವಿರುದ್ಧ ಹೇಳಿಕೆ, ಕೇಂದ್ರ ಸಚಿವ ರವನೀತ್ ವಿರುದ್ಧ ದೂರು ದಾಖಲು

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ, ಕೇಂದ್ರ ಸಚಿವ ರವನೀತ್ ವಿರುದ್ಧ ದೂರು ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ರೈಲ್ವೆ ಮತ್ತು ಆಹಾರ ಖಾತೆ ಸಹಾಯಕ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆಪ್ಟಂಬರ್ 15ರಂದು ಬಿಹಾರದ ಬಾಗಲ್ಪೂರದಲ್ಲಿ ವಂದೇ ಭರತ್ ರೈಲು ಸಂಚಾರ ಉದ್ಘಾಟನೆ ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಸಚಿವ ರವನೀತ್ ಸಿಂಗ್ ಅವರು ರಾಹುಲ್ ಗಾಂಧಿ ಮತ್ತು ಅವರ ಕುಟುಂಬದವರ ಗೌರವಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ವಿಜಯನಗರ ನಿವಾಸಿ ಎಂ.ವಿ. ರವೀಂದ್ರ ದೂರು ನೀಡಿದ್ದರು. ಈ ಅನ್ವಯ ರವನೀತ್ ಸಿಂಗ್ ವಿರುದ್ಧ ಹೈಗ್ರೌಂಡ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular