HomeKarnatakaಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ದಾವಣಗೆರೆ: ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸಂಸದ ಡಿ.ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರ ರೀತಿ ದೇಶದ್ರೋಹದ ಹೇಳಿಕೆ ನೀಡಿದವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ಪ್ರಧಾನಿಯವರಿಗೆ ಒತ್ತಾಯಿಸುತ್ತೇನೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದರು.

ಕಾಂಗ್ರೆಸ್ ಮುಖಂಡ ಹನುಮಂತಪ್ಪ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆ ನಿವಾಸಿ ಹನುಮಂತಪ್ಪ ಅವರ ದೂರಿನ ಮೇರೆಗೆ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿಕೆ ಬಗ್ಗೆ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular