HomeUncategorizedರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ, ಶಾಸಕ ಬಸವರಾಜ ಶಿವಗಂಗಾಗೆ ನೋಟಿಸ್: ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ, ಶಾಸಕ ಬಸವರಾಜ ಶಿವಗಂಗಾಗೆ ನೋಟಿಸ್: ಡಿ.ಕೆ. ಶಿವಕುಮಾರ್

ಬೆಂಗಳೂರು: ಅನೇಕ ಬಾರಿ ಎಚ್ಚರಿಕೆ ನೀಡಿದ್ದರೂ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹೇಳಿಕೆ ನೀಡುವುದನ್ನು ಮುಂದುವರೆಸಿರುವ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಅವರಿಗೆ ನೋಟಿಸ್ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

 ಸಿಎಂ ಬದಲಾವಣೆ, ಅಧಿಕಾರ ಹಸ್ತಾಂತರ, ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತನಾಡಬಾರದು, ಪಕ್ಷದ ಶಿಸ್ತು ಪಾಲಿಸಬೇಕು, ಅನಗತ್ಯ ಹೇಳಿಕೆ ನೀಡಿ ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದರೂ ಬಸವರಾಜ ಶಿವಗಂಗಾ ಮತ್ತೆ ಮತ್ತೆ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ. ಈ ಬಗ್ಗೆ ಅವರಿಗೆ ಸೂಚನೆ ನೀಡಿದ್ದು, ನೋಟಿಸ್ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular